ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ಜಾಲವು ವಿಸ್ತರಣೆ ಆಗುತ್ತಿದೆ. ದಿನೇ ದಿನೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅವರ ಸಂಚಾರಕ್ಕೆ ಅನುಕೂಲವಾಗುಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಹೊಸ ಮಾರ್ಗ, ಮೆಟ್ರೋ ನಿಲ್ದಾಣಗಳ ವ್ಯಾಪ್ತಿಯಲ್ಲಿ ಆರಂಭಿಸಿದೆ. ಇದೀಗ ನಮ್ಮ ಮೆಟ್ರೋ ಹಳದಿ ಮಾರ್ಗದ 03 ನಿಲ್ದಾಣಗಳ ಸವಾರರಿಗೆ ನೆರವಾಗುವಂತೆ ಬಿಎಂಟಿಸಿ ಬಸ್ ಸೇವೆ ಶುರುವಾಗಿದೆ. ಬಸ್ ಮಾರ್ಗ, ಸಮಯ ವಿವರ ಇಲ್ಲಿದೆ.
ನಮ್ಮ ಮೆಟ್ರೋ ಹೊಸ ರಸ್ತೆ, ಸಿಂಗಸಂದ್ರ ಹಾಗೂ ಕುಡ್ಲು ಗೇಟ್ ಮೆಟ್ರೋ ನಿಲ್ದಾಣಗಳಿಗೆ ಬಿಎಂಟಿಸಿ ಮೆಟ್ರೋ ಫೀಡರ್ ಬಸ್ ಸೇವೆಗಳು ಆರಂಭವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ-ಬೊಮ್ಮಸಂದ್ರ ವರೆಗಿನ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಈಗಾಗಲೇ ಆರಂಭವಾಗಿದೆ. ಇಲ್ಲಿ ಮೆಟ್ರೋ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರ ಸಂಚಾರ ಸಹ ಏರಿಕೆ ಆಗುತ್ತಿದೆ
ಮೆಟ್ರೋ ಪ್ರಯಾಣಿಕರಿಗೆ ಸುಗಮವಾದ ಮೊದಲ ಹಾಗೂ ಕೊನೆಯ ಮೈಲಿ ಸಂಪರ್ಕ ಕಲ್ಪಿಸುವ ಸದುದ್ದೇಶದಿಂದ ಬಿಎಂಟಿಸಿ ಮೆಟ್ರೋ ಫೀಡರ್ ಬಸ್‌ಗಳ ಸೇವೆ ಆರಂಭಿಸಿದೆ. ಈ ಹಿಂದೆ ಒಂದಷ್ಟು ಮಾರ್ಗಗಳಲ್ಲಿ ಬಸ್ ಸಂಚಾರ ಶುರುವಾಗಿತ್ತು. ಇದೀಗ ಹೊಸ ರಸ್ತೆ, ಸಿಂಗಸಂದ್ರ ಹಾಗೂ ಕುಡ್ಲು ಗೇಟ್ ಮೆಟ್ರೋ ನಿಲ್ದಾಣಗಳನ್ನು ಸುತ್ತಮುತ್ತಲಿನ ವಸತಿ ಮತ್ತು ವಾಣಿಜ್ಯ ಪ್ರದೇಶಗಳಿಗೆ ಬಸ್ ಸಂಪರ್ಕ ಸಾಧ್ಯವಾಗಲಿದೆ. ಜನಸಂದಣಿಯನ್ನು ಕಡಿಮೆ ಮಾಡಲು ಹಾಗೂ ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಲಭಗೊಳಿಸಲಿವೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ. ಯಾವೆಲ್ಲ ಮಾರ್ಗದಲ್ಲಿ ಸೇವೆ ಲಭ್ಯವಿದೆ ಎಂಬ ಮಾಹಿತಿ ಇಲ್ಲಿದೆ. Also Read

