ಮಧುಗಿರಿ : ತಾಲ್ಲೂಕಿನ ಕಸಬಾ ಹೋಬಳಿಯ ಸಿದ್ದಾಪುರ ಗ್ರಾಮದ ಲಕ್ಷ್ಮೀನಾರಾಯಣ್ ಹಾಗೂ ಕಮಲಮ್ಮ ಅವರ ಪುತ್ರಿಯಾದ ಎಸ್.ಎಲ್. ಜಯಶ್ರೀ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಮಾಡರ್ನ್ ಇಂಡಿಯನ್ ಲಿಟರರಿ ಕ್ರಿಟಿಸಿಸಂ ಇನ್ ಇಂಗ್ಲಿಷ್: ಪ್ರಿನ್ಸಿಪಲ್ಸ್ ಅಂಡ್ ಪ್ರಾಕ್ಟಿಸಸ್ ಎಂಬ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ.
ಜಯಶ್ರೀ ಅವರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರ ಅನೇಕ ಸಂಶೋಧನಾ ಲೇಖನಗಳು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಾಹಿತ್ಯ ಸಂಶೋಧನಾ ಪತ್ರಿಕೆಗಳು ಮತ್ತು ಮಾಸ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
ಪ್ರಸ್ತುತ ಬೆಂಗಳೂರಿನ ಶಾಂತಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

