ಎಲ್ಲರೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕನ್ನು ಸಾಗಿಸಬೇಕು : ಕೆ.ಎನ್.ರಾಜಣ್ಣ

ಮಧುಗಿರಿ : ಪ್ರಪಂಚದಲ್ಲಿ ನಡೆಯುತ್ತಿರುವ ಅಶಾಂತಿಯೆಲ್ಲಾ ದೂರವಾಗಿ, ಎಲ್ಲರೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕನ್ನು ಸಾಗಿಸಬೇಕು ಎಂದು ಶಾಸಕ ಕೆ.ಎನ್. ರಾಜಣ್ಣ ಹೇಳಿದರು.

ಪಟ್ಟಣದ ಶಿರಾ ಗೇಟ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಮುಸ್ಲಿಂ ಸಮುದಾಯದವರಿಗೆ ರಂಜಾನ್ ಅತ್ಯಂತ ಪವಿತ್ರ ಹಬ್ಬವಾಗಿದ್ದು, ಆತ್ಮಶುದ್ಧಿ ಮತ್ತು ಸಹೋದರತ್ವದ ಸಂದೇಶವನ್ನು ಸಾರುತ್ತದೆ ಎಂದು ಹೇಳಿದರು.

ಧರ್ಮ–ಜಾತಿ ಯಾವುದೇ ಇದ್ದರೂ ಕೂಡ ನಾವು ಎಲ್ಲರೂ ಭಾರತೀಯರು ಎಂಬ ಭಾವನೆ ಹೊಂದಬೇಕು. ಪರಸ್ಪರ ಗೌರವ, ಸಹಿಷ್ಣುತೆ ಮತ್ತು ಐಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದು ಅವರು ತಿಳಿಸಿದರು.

ಈದ್ಗಾ ಮೈದಾನದಲ್ಲಿ ಶಾಶ್ವತವಾಗಿ ಶೆಡ್ ನಿರ್ಮಾಣ ಮಾಡಿಸಲಾಗುವುದು. ಇದರಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಅನುಕೂಲವಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ,ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಕೆ.ನಂಜುಂಡಯ್ಯ, ಎನ್.ಗಂಗಣ್ಣ , ಮೊಹಮ್ಮದ್ ಅಯೂಭ್ ಮಾಜಿ ಸದಸ್ಯರಾದ ಅಲೀಮ್, ಜಾಫರ್ ಸಾಧಿಕ್ , ಮುಖಂಡರಾದ ಬಾಬ ಪಕೃದ್ದೀನ್ , ಸಯೈದ್ , ಎಂ.ಆರ್.ಖಲೀಲ್ ಇದ್ದರು.

Leave a Reply

Your email address will not be published. Required fields are marked *

error: Content is protected !!