ಮಧುಗಿರಿ : ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಎಸ್. ಕುಮಾರ್ ಅವರನ್ನು ಪ್ರಾಂಶುಪಾಲರ ಸೇವಾ ಜೇಷ್ಠತೆಯಲ್ಲಿ ಹಿರಿಯರ ಕೋಟಾದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹಾಗೂ ವಿದ್ಯಾವಿಷಯಕ ಪರಿಷತ್ ನ ಸದಸ್ಯರಾಗಿ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಂದ ನಾಮನಿರ್ದೇಶಿತಗೊಂಡಿದ್ದಾರೆ.
ನಾಮನಿರ್ದೇಶನಗೊಂಡ ಪ್ರಾಂಶುಪಾಲ ಪ್ರೊ.ಕೆ.ಎಸ್.ಕುಮಾರ್ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿ, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

